
ಮಂಗಳೂರು ನಗರ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರಲಿದೆ. ಮಲೆನಾಡು ಕೊಡಗು ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಕಲಬುರಗಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.






















