
ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್ ವಿಜಯಪುರ, ಕೊಪ್ಪಳ ,ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಕೋಲಾರ ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಸಾಧ್ಯತೆ ಇದೆ.




























