
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ , ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಹಾವೇರಿ, ಗದಗ ,ಕೊಪ್ಪಳ, ಧಾರವಾಡ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಂತರ ,ಮೈಸೂರು, ಮಂಡ್ಯ ,ಚಾಮರಾಜನಗರ ,ರಾಮನಗರ, ತುಮಕೂರು ,ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




























