
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ಚಿಕ್ಕಮಗಳೂರು ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.





















































































