
ರಾಜ್ಯದಲ್ಲಿ ಇಂದು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ತೀರದಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸುವಂತೆ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಹಾಸನ ಶಿವಮೊಗ್ಗ ಚಿಕ್ಕಮಂಗಳೂರು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇದೆ.

































