
ಮುಂದಿನ ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆ ಕ್ಷೀಣಿಸಲಿದ್ದು, ಕರಾವಳಿ ಮತ್ತು ಒಳನಾಡಿನ ಜನತೆಗೆ ಬಿಸಿಲಿನ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 22ರ ನಂತರ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಕಾಸರಗೋಡು, ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿದ್ದು ಸಂಜೆಯ ವೇಳೆಗೆ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜಾಗತಿಕ ಹವಾಮಾನ ವೈಪರೀತ್ಯದ ಸಂಕೇತವಾಗಿರುವ “ಎಲ್ ನಿನೋ”ಈಗಾಗಲೇ ಆರಂಭಗೊಂಡಿದ್ದು ಮುಂಬರುವ ನಂಬರ್ ತಿಂಗಳಲ್ಲಿ ತೀವ್ರ ಸ್ವರೂಪ ಪಡೆಯಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಇದರ ಕಾರಣ ರಾಜ್ಯದಲ್ಲಿ ಮುಂಗಾರು ಮಾರುತಗಳು ದುರ್ಬಲಗೊಳ್ಳಲಿದೆ.

































