
ರಾಜ್ಯದಲ್ಲಿ ಮುಂಗಾರು ಚುರುಕುಕೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಒಂದೆರಡು ಕಡೆಗಳಲ್ಲಿ ಯೆಲ್ಲೋ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.


































