
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ ಬೆಳಗಾವಿ ಧಾರವಾಡ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.


































