
ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ತೀರಗಳಾದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ,ಹಾವೇರಿ ,ಕಲಬುರುಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.


































