
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗಗಳಲ್ಲಿ ಭಾರಿ ಮಳೆ ಆಗಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.








































