
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ,ರೆಡ್ ಅಲರ್ಟ್ ಘೋಷಣೆ ಮಾಡಿಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ರಜೆ ಆದೇಶ ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಭಾಗಗಳಲ್ಲೂ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಆದೇಶ ನೀಡಲಾಗಿದೆ.








































