
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ ಹಾಗೂ ಮಲೆನಾಡು ಭಾಗ ಶಿವಮೊಗ್ಗ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರದಲ್ಲೂ ಮೋಡಕವಿದ ವಾತಾವರಣವಿದ್ದು ಮಳೆ ಯಾಗಲಿದೆ.











































