
ಮುಂದಿನ 24 ಗಂಟೆ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ಮೈಸೂರು ಬಾಗಲಕೋಟೆ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಮೈಸೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ.
ಬಾಗಲಕೋಟೆ, ಬೀದರ್ ,ಕಲಬುರಗಿ ,ಕೊಪ್ಪಳ ,ರಾಯಚೂರು ,ವಿಜಯಪುರ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಯಾಗಲಿದೆ.





















































































