
ಜುಲೈ 17 ಮತ್ತು 18ರಂದು ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದ ಗಾಳಿ ಬೀಸಲಿದ್ದು ಮಳೆಯಾಗಲಿದೆ. ಕರಾವಳಿ ಭಾಗದಲ್ಲೂ ಮಳೆ ಮುಂದುವರೆಯಲಿದೆ.
ಜುಲೈ 17ರಂದು ಬೀದರ್, ಕಲಬುರಗಿ ,ಯಾದಗಿರಿ, ರಾಯಚೂರು, ಬೆಳಗಾವಿ ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.















































