
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 20ರಂದು ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ,ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವ ಕಾರಣ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬಲವಾದ ಗಾಳಿ ಬೀಸುವ ಸಂದರ್ಭದಲ್ಲಿ ಮರಗಳು, ತಾತ್ಕಾಲಿಕ ಶೆಡ್ಡುಗಳು ಮತ್ತು ಹೋರ್ಡಿಂಗ್ ಗಳ ಸಮೀಪ ವಾಹನ ನಿಲುಗಡೆ ಮಾಡಿದಂತೆ ಮನವಿ ಮಾಡಲಾಗಿದೆ.

















































