
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಕೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಹಾಗೂ ಉತ್ತರ ಕನ್ನಡ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಉಡುಪಿ ,ಉತ್ತರಕನ್ನಡ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಬಾಗಲಕೋಟೆ ,ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ,ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.






















































