
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ,ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.






















































