
ರಾಜ್ಯದಲ್ಲಿ ನೈರುತ್ಯ ಮಾರುತ ಚುರುಕುಗೊಂಡಿದ್ದು ಇಂದು ಕರಾವಳಿ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ತೀರದಲ್ಲಿ ಮಳೆ ಹೆಚ್ಚಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಳೆ ಹೆಚ್ಚಾಗಲಿದ್ದು ಗುಡ್ಡಗಾಡು ಪ್ರದೇಶದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ,ಗ್ರಾಮಾಂತರ ,ಮೈಸೂರು, ಹಾಸನ, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು ರಾತ್ರಿಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

























































