
ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಭೀತಿ ಎದುರಾಗಿದೆ. ಇದರ ಪ್ರಭಾವದಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಮಲೆನಾಡಲ್ಲಿ ವರುಣಾರ್ಭಟ ಮುಂದುವರೆಯಲಿದ್ದು, ಇಂದು ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 21 ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.








