
ರಾಜ್ಯದಲ್ಲಿ ಇನ್ನೂ ಐದು ದಿನ ಮಳೆಯ ಆರ್ಭಟ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








