
ಮಧ್ಯಪ್ರದೇಶ: ಮೇ.17 ಶುಕ್ರವಾರ ರಾತ್ರಿ ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ಪುನೀತ್ ದುಬೆ ಇಂದೋರ್‌ನ ಹಾಸ್ಟೆಲ್ ಕೊಠಡಿಯಲ್ಲಿ ಕೈಗಳಿಗೆ ಹಸಿರು ಬಳೆಗಳನ್ನು ತೊಟ್ಟು, ವಧುವಿನಂತೆ ಅಲಂಕಾರ ಮಾಡಿಕೊಂಡು ಹಾಸ್ಟೆಲ್ನ ತನ್ನ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಅಚ್ಚರಿಯ ಘಟನೆ ನಡೆದಿದೆ.
ಹಾಸ್ಟೆಲ್ ಸಿಬ್ಬಂದಿ ಯುವಕನ ಶವ ಕಂಡು ಪೊಲೀಸರಿಗೆ ಕರೆ ಮಾಡಿದ್ದು, ಭನ್ವಾರ್ಕುವಾನ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ಪ್ರಾರಂಭಿಸಿದ್ದಾರೆ. ಸಿಂಗಾರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೇಸ್ ಚರ್ಚೆಗೆ ಕಾರಣವಾಗಿದ್ದು, ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣವೇನು ಎನ್ನುವುದೇ ಪೊಲೀಸರಿಗೆ ತಿಳಿದು ಬಂದಿಲ್ಲ.
ಇಂದೋರ್‌ನ ರಂಜಿತ್ ಸಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ವಿದ್ಯಾರ್ಥಿ ಪುನೀತ್, ಮಧ್ಯಪ್ರದೇಶ ಸಾರ್ವಜನಿಕ ಸೇವಾ ಆಯೋಗದ (MPPSC) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಶವ ಪತ್ತೆಯಾದಾಗ ಶವದ ಬಳಿ ನೆಲದ ಮೇಲೆ ರಕ್ತದ ಮಡುವಿತ್ತು. ಪುನೀತ್ ಸಾವನ್ನು ಆತ್ಮಹತ್ಯೆ ಮತ್ತು ಕೊಲೆ ಎರಡರಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.