
ತಂಜಾವೂರು: ತಮಿಳುನಾಡು ಉಪ ಮುಖ್ಯಮಂತ್ರಿ ಉದಯ ನಿಧಿ ಸ್ಟಾಲಿನ್ “ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯನ್ನು ಯಾವ ಸಂದರ್ಭದಲ್ಲೂ ಒಪ್ಪಿಕೊಳ್ಳುವುದಿಲ್ಲ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಿರಸ್ಕರಿಸಿರುವ ನಾವು, ತಮಿಳು ಮತ್ತು ಇಂಗ್ಲಿಷ್ ಒಳಗೊಂಡ ದ್ವಿಭಾಷಾ ನೀತಿಯನ್ನೇ ಮುಂದುವರಿಸುವುದಾಗಿ” ಸ್ಪಷ್ಟವಾಗಿ ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕೇಂದ್ರ ಸರ್ಕಾರ ತಮಿಳುನಾಡಿನ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು ಎನ್ಇಪಿ ಅನುಮೋದನೆ ಎಂದರೆ ಹಿಂದಿ ಪ್ರಾಬಲ್ಯವನ್ನು ಒಪ್ಪಿಕೊಂಡಂತಾಗುತ್ತದೆ. ರಾಜ್ಯದ ಭಾಷಾ ಗೌರವಕ್ಕೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಒಪ್ಪುವುದಿಲ್ಲ. ಅಣ್ಣಾ ಕಾಲದಿಂದ ನಡೆದು ಬಂದಿರುವ ದ್ವಿಭಾಷಾ ನೀತಿಯನ್ನು ಮುಂದುವರಿಸುವಲ್ಲಿ ನಾವು ಕಟ್ಟುನಿಟ್ಟಾಗಿ ನಿಂತಿದ್ದೇವೆ” ಎಂದು ಪುನರುಚ್ಚರಿಸಿದರು.









