ಇಂದು, ಹಿಂದೂ ಸಂಘಟನೆಗಳಿಂದ ದ.ಕನ್ನಡ ಜಿಲ್ಲೆ ಬಂದ್ ಗೆ ಕರೆ

ಮಂಗಳೂರು: ಹಿಂದೂ ಕಾರ್ಯಕರ್ತ, 2022 ರ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಬಜ್ಪೆ ಸಮೀಪ ತಡರಾತ್ರಿ ಹತ್ಯೆ ಮಾಡಲಾಗಿತ್ತು.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು, ಖಂಡಿಸಿ ಇಂದು (ಶುಕ್ರವಾರ)ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಇಂದು ಬೆಳಿಗ್ಗೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿಯಾಗಿದೆ.
ವಿಶ್ವ ಹಿಂದೂ ದಕ್ಷಿಣ ಪ್ರಾಂತ್ಯ ಸಂಚಾಲಕ ಶರಣ್ ಪಂಪ್ ವೆಲ್ ಬಂದ್ ಗೆ ಕರೆ ನೀಡಿದ್ದು, ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ. ಇದು ಒಂದು ಪೂರ್ವ ಯೋಜಿತ ಹತ್ಯೆ, ಇದರ ಹಿಂದೆ ನಿಷೇಧಿತ ಪಿಎಫ್ಐ ಕೈವಾಡ ಇದೆ ಎಂದು ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ.





