
ನವದೆಹಲಿ: ಕೇಂದ್ರ ಸರ್ಕಾರವು ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆ ನೀಡುವ ನಿಟ್ಟಿನಲ್ಲಿ ಆದಾಯವನ್ನು ಲೆಕ್ಕಿಸದೆ 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಅನುಮತಿ ಸೂಚಿಸಿದೆ.
ಈ ಯೋಜನೆ ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ ಸುಮಾರು 4.5 ಕೋಟಿ ಕುಟುಂಬಗಳಿಗೆ ಕುಟುಂಬ ಆಧಾರದ ಮೇಲೆ 5 ಲಕ್ಷ ರೂಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದ್ದು ಅರ್ಹ ಹಿರಿಯ ನಾಗರಿಕರಿಗೆ ಎಬಿ ಪಿಎಂ-ಜೆಎವೈ ಅಡಿಯಲ್ಲಿ ಹೊಸ ಕಾರ್ಡ್ ನೀಡಲಾಗುವುದು.













