
ಇಂದು ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಹುಟ್ಟುಹಬ್ಬದ ದಿನವಾಗಿದ್ದು 33 ವರ್ಷದ ನಟಿಯ ಮದುವೆಯ ಬಗ್ಗೆ ಅವರ ಅಭಿಮಾನಿಗಳಿಗೆ ಚಿಂತೆಯಿದ್ದು ಇಂದು ಅಭಿಮಾನಿಗಳ ಎದುರೇ ಮದುವೆಯ ಕುರಿತು ಮಾತನಾಡಿದ್ದಾರೆ.
ಇಂದು ರಚಿತಾ ರಾಮ್ ಅವರು ತಮ್ಮ ಅಭಿಮಾನಿಗಳ ಎದುರು ಹುಟ್ಟುಹಬ್ಬ ಆಚರಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದು ಅದರಂತೆ ಅಭಿಮಾನಿಗಳ ದಂಡೇ ಅವರ ಮನೆಯೆದುರು ಸೇರಿತ್ತು. ಈ ಸಂದರ್ಭದಲ್ಲಿ ನಟಿಗೆ ಮದುವೆಯ ಬಗ್ಗೆ ಪ್ರಶ್ನೆ ಮಾಡಲಾಗಿದ್ದು ಆಗ ನಟಿ ಖಂಡಿತವಾಗಿಯೂ ಮದುವೆ ಆಗುವ ಯೋಚನೆಯಿದೆ. ತಂದೆ-ತಾಯಿಯರಿಗೂ ಹೇಳಿದ್ದೇನೆ. ಹುಡುಗನನ್ನು ನೋಡಲು ಶುರು ಮಾಡಿದ್ದಾರೆ. ಇಂಥದ್ದೇ ಕ್ವಾಲಿಟಿ ಅಂತೇನೂ ಇಲ್ಲ. ಯಾರನ್ನೇ ಕರೆದುಕೊಂಡು ಬಂದು ಮದುವೆಯಾಗು ಎಂದರೆ ಆಗುತ್ತೇನೆ. ದೇವರು ಯಾರನ್ನು ಕಳಿಸುತ್ತಾನೋ ಅದನ್ನು ನಾನು ಅಕ್ಸೆಪ್ಟ್ ಮಾಡುತ್ತೇನೆ ಎನ್ನುವ ಮೂಲಕ ಮದುವೆ ಹುಡುಗನ ಸಂಪೂರ್ಣ ಜವಾಬ್ದಾರಿಯನ್ನು ಪೋಷಕರ ಮೇಲೆ ಬಿಟ್ಟಿರುವುದಾಗಿ ಹೇಳಿದ್ದಾರೆ.



















