
ಹುಬ್ಬಳ್ಳಿ: ರಾಜ್ಯ ಸರ್ಕಾರವು ಬಿಹಾರದ ಮೂಲದ ಸೈಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ.
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಕಾಮುಕ ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ನನ್ನು ಎನ್‌ಕೌಂಟರ್ ಮಾಡಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆಯಲೆಂದು ಪೊಲೀಸರು ಹೋಗುವ ವೇಳೆ ಆರೋಪಿಯು ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದು ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದಾನೆ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ.
ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ ಅವರು ಹಾರಿಸಿದ ಗುಂಡು ಎದೆಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆದರೆ ಚಿಕಿತ್ಸೆ ಫಲಿಸದೇ ಆರೋಪಿ ರಿತೇಶ್ ಕೊನೆಯುಸಿರೆಳೆದಿದ್ದಾನೆ.
ಪೊಲೀಸರ ಕಾರ್ಯಕ್ಕೆ ಜನರು ಜೈಕಾರ ಹಾಕಿದ್ದು ಇನ್ನೂ, ಬಾಲಕಿ ಹಾಗೂ ಆರೋಪಿ ಹಿತೇಶ್ ಮೃತದೇಹ ಕಿಮ್ಸ್ ಆಸ್ಪತ್ರೆಯಲ್ಲೇ ಇದ್ದು, ಇಂದು ಕುಟುಂಬಸ್ಥರಿಗೆ ಹಸ್ತಾಂತರಿಲಾಗುತ್ತದೆ ಎಂದು ತಿಳಿದುಬಂದಿದೆ.