
ಹುಬ್ಬಳ್ಳಿ: ಕಳೆದ ಮೂರು ತಿಂಗಳಿಂದ ಅವಳಿ ನಗರದ ಪೊಲೀಸ್ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ ಶಶಿಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅವಳಿ ನಗರದಲ್ಲಿರುವ ಎಲ್ಲಾ ಪ್ರದೇಶಗಳಿಗೂ ಕೂಡ ಕಾಲ್ನಡಿಗೆಯಲ್ಲಿ ಪ್ರತಿದಿನ ನಾಲ್ಕರಿಂದ ಐದು ಕಿಲೋಮೀಟರ್ ಓಡಾಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ್ದ ಎನ್ ಶಶಿಕುಮಾರ್ ಗುರುವಾರ ಕೂಡ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6:00 ವರೆಗೂ ಅವಳಿ ನಗರವನ್ನು ಬೈಕ್ ನಲ್ಲಿ ಓಡಾಡಿ ಗಸ್ತು ತಿರುಗಿದ್ದರು.
ಕಳೆದ ಮೂರು ತಿಂಗಳಿಂದ ಬಿಡುವಿಲ್ಲದೆ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.









