
ಹೆಬ್ರಿ :ಹೆಬ್ರಿ ಧಾರ್ಮಿಕ ಶಿಕ್ಷಣ ಶಿಬಿರದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯ ಕಾರ್ಯಾಲಯದ ಕೆಲಸಗಳಿಗೆ ಅನುಕೂಲವಾಗುವಂತೆ ಲ್ಯಾಪ್ ಟ್ಯಾಪ್ ನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಸಮರ್ಪಿಸಿ ಗೋಶಾಲೆಯ ಟ್ರಸ್ಟಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗೋಶಾಲೆಯ ಟ್ರಸ್ಟಿಗಳಾದ ವಿದ್ವಾನ್ ಪದ್ಮನಾಭ ಆಚಾರ್ಯ, ಸಿಎ ಎಂ. ರವಿರಾವ್, ಡಾ. ಭಾರ್ಗವಿ ಆರ್. ಐತಾಳ್, ವಿದ್ವಾನ್ ವಿಷ್ಣುಮೂರ್ತಿ ಆಚಾರ್ಯ, ವಿಷ್ಣುಮೂರ್ತಿ ನಾಯಕ್ ಮತ್ತು ಶಿಬಿರ ವ್ಯವಸ್ಥಾಪನ ಸಮಿತಿಯ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ಬಲ್ಲಾಡಿ ಚಂದ್ರಶೇಖರ ಭಟ್, ವರಂಗ ರಾಮಚಂದ್ರ ಭಟ್, ಸುದರ್ಶನ್ ಕಲ್ಕೂರ್ ಉಪ್ಪಳ ಹಾಗೂ ಗೋಶಾಲೆಯ ಉಸ್ತುವಾರಿ ಸುಬ್ರಮಣ್ಯ ನಾಯಕ್, ಹೆಬ್ರಿ ಗಣಪತಿ ಪ್ರಭು ಉಪಸ್ಥಿತರಿದ್ದರು.






















































