ಏ. 23 ಕಾಲೇಜು ಸಭಾಂಗಣ, ಪೂರ್ವಾಹ್ನ 9:30ಕ್ಕೆ

ದಿನಾಂಕ 23-04-2026 ರಂದು ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಹೆಬ್ಬೆರಿ ವೈಬ್ಸ್ ಜರುಗಲಿದ್ದು ಕಾರ್ಕಳ ಕ್ಷೇತ್ರದ ಶಾಸಕರಾಗಿರುವ ವಿ ಸುನಿಲ್ ಕುಮಾರ್ ಇವರು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರು ವಲಯದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ ಕೆ ಆರ್ ಕವಿತಾ, ಹೆಬ್ರಿಯ ಖ್ಯಾತ ಉದ್ಯಮಿ ಸತೀಶ್ ಪೈ ಭಾಗವಹಿಸಲಿದ್ದು ಮಂಗಳೂರು ಮತ್ತು ಕುವೆಂಪು ವಿಶ್ವವಿದ್ಯಾನಿಲಯ ವಲಯದ ಕಾಲೇಜುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಸಮಾರೋಪ ಸಮಾರಂಭದಲ್ಲಿ ಉದಯ ಶೆಟ್ಟಿ ಮುನಿಯಾಲು ಹಾಗೂ ಎಸ್ಆರ್ ಸ್ಕೂಲ್ ನ ಎಚ್ ನಾಗರಾಜ ಶೆಟ್ಟಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಂದು ಪ್ರಾಂಶುಪಾಲರಾದ ಡಾ. ವಿದ್ಯಾಧರ ಹೆಗ್ಡೆ ಎಸ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.














