25.9 C
Udupi
Friday, February 20, 2026
spot_img
spot_img
HomeBlogಹೊಸ ವರ್ಷದಂದು ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ

ಹೊಸ ವರ್ಷದಂದು ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ

ಡಿಎಪಿ ಮೇಲಿನ ವಿಶೇಷ ಸಬ್ಸಿಡಿ ಸೌಲಭ್ಯವನ್ನು ವಿಸ್ತರಿಸಲು ಕ್ಯಾಬಿನೆಟ್‌ ಅನುಮೋದನೆ

ನವದೆಹಲಿ: ಎಲ್ಲರೂ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದು ಈ ವೇಳೆ ಕೇಂದ್ರ ಸರ್ಕಾರ ರೈತರಿಗೆ ಖುಷಿ ಸುದ್ದಿ ನೀಡಿದೆ. ಅದೇನೆಂದರೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಡಿ-ಅಮೋನಿಯಂ ಫಾಸ್ಫೇಟ್ ಮೇಲಿನ ವಿಶೇಷ ಸಬ್ಸಿಡಿ ಸೌಲಭ್ಯವನ್ನು ವಿಸ್ತರಿಸಲು ಒಪ್ಪಿಗೆ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ವರ್ಷದ ಮೊದಲ ಸಚಿವ ಸಂಪುಟ ಸಭೆಯನ್ನು ರೈತರಿಗೆ ಸಮರ್ಪಿಸಿ ಕೇವಲ ರೈತರಿಗೆ ಸಂಬಂಧಿಸಿದ ನಿರ್ಧಾರಗಳಿಗೆ ಕ್ಯಾಬಿನೆಟ್‌ ಅನುಮೋದನೆ ನೀಡಿದೆ.

ಈ ನಿರ್ಧಾರದಿಂದ ರೈತರು 50 ಕೆಜಿ ತೂಕದ ಡಿಎಪಿ ರಸಗೊಬ್ಬರವನ್ನು 1,350 ರೂ. ಚಿಲ್ಲರೆ ದರದಲ್ಲಿ ಖರೀದಿಸಬಹುದಾಗಿದ್ದು ಈ ಸಬ್ಸಿಡಿ ಜನವರಿ 1ರಿಂದ ಜಾರಿಗೆ ಬರಲಿದೆ.

ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರೈತರು 1,350 ರೂ.ಗೆ 50 ಕೆಜಿ ಡಿಎಪಿ ರಸಗೊಬ್ಬರ ಖರೀದಿ ಮಾಡುವುದನ್ನು ಮುಂದುವರಿಸಬಹುದು. ಬೇರೆ ದೇಶಗಳಲ್ಲಿ 50 ಕೆಜಿ ರಸಗೊಬ್ಬರಕ್ಕೆ 3 ಸಾವಿರ ರೂ.ಗೂ ಅಧಿಕ ವೆಚ್ಚವಾಗುತ್ತದೆ. 2014-24 ಅವಧಿಯಲ್ಲಿ ರೈತರಿಗಾಗಿ 11.9 ಲಕ್ಷ ಕೋಟಿ ರೂ. ಸಬ್ಸಿಡಿ ನೀಡಲಾಗಿದೆ. 2004-14ರ ಅವಧಿಗೆ ಹೋಲಿಸಿದರೆ ಸಬ್ಸಿಡಿ ಪ್ರಮಾಣ ದುಪ್ಪಟ್ಟಾಗಿದೆ ಎಂದು ಮಾಹಿತಿ ನೀಡಿದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page