
ಜು 5ರಂದು ಕಾರ್ಕಳ ಬಿಜೆಪಿ ಮುಖಂಡರಾದ ನವೀನ್ ನಾಯಕ್ ರವರು ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಅವರ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿದ್ದು ಈ ಕುರಿತು ಪೋಲಿಸ್ ಇಲಾಖೆಯ ಮೇಲೆ ಸಾಮಾನ್ಯ ಜನತೆಗೆ ಇರುವ ಗೌರವಕ್ಕೆ ಧಕ್ಕೆಯನ್ನು ಉಂಟುಮಾಡುವ ಪ್ರಯತ್ನವನ್ನು ಮಾಡಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಈ ಕುರಿತು ತಕ್ಷಣವೇ ಅವರ ವಿರುದ್ದ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕಾರ್ಕಳ ಯುವ ಕಾಂಗ್ರೇಸ್ ನೇತೃತ್ವದಲ್ಲಿ ಇಂದು ಡಿವೈಎಸ್ ಪಿ ದೂರನ್ನು ನೀಡಲಾಯಿತು ಈ ಸಂಧರ್ಭದಲ್ಲಿ ಕಾರ್ಕಳ ಪುರಸಭಾ ಮಾಜಿ ಅಧ್ಯಕ್ಷರಾದ ಸುಭೀತ್ ಎನ್ ಅರ್, ಕಾರ್ಕಳ ಯುವ ಕಾಂಗ್ರೇಸ್ ಅಧ್ಯಕ್ಷ ಯೋಗೀಶ್ ಇನ್ನಾ,ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನಕಾರ್ಯದರ್ಶಿ ರಂಜಿತ್ ಸಿಟಿ,ಕಾರ್ಕಳ ಯುವ ಕಾಂಗ್ರೇಸ್ ಉಪಾಧ್ಯಕ್ಷರಾದ ಸುಹಾಸ್ ಕಾವ ಯುವಕಾಂಗ್ರೇಸ್ ಮುಖಂಡರಾದ ಸೂರಜ್ ಶೆಟ್ಟಿ,ನೀಲೇಶ್ ಕಾರ್ಕಳ ಉಪಸ್ಥಿತರಿದ್ದರು.














