
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ.








