29.1 C
Udupi
Wednesday, April 8, 2026
spot_img
spot_img
HomeBlog10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಬಿಹಾರ: ಜೆಡಿಯು ಪಕ್ಷಾಧ್ಯಕ್ಷ ನಿತೀಶ್‌ ಕುಮಾರ್‌ ಅವರು ಎನ್‌ಡಿಎ ಕೂಟದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಇಂದು ಇವರು ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ 10ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜೆಡಿಯುನ ವಿಜಯ್‌ ಚೌಧರಿ ನಿತೀಶ್‌ರನ್ನು ಕೂಟದ ನಾಯಕರನ್ನಾಗಿಸುವ ಪ್ರಸ್ತಾಪವನ್ನು ಸಲ್ಲಿಸಿದ್ದು, ಬಿಜೆಪಿ ನಾಯಕರಾದ ಸಾಮ್ರಾಟ್‌ ಚೌಧರಿ ಮತ್ತು ವಿಜಯ್‌ ಸಿನ್ಹಾ ಬೆಂಬಲಿಸಿದರು. ಬಳಿಕ ಔಪಚಾರಿಕವಾಗಿ ನಿತೀಶ್‌ರನ್ನು ತಮ್ಮ ನಾಯಕ ಎಂದು ಎನ್‌ಡಿಎ ಘೋಷಿಸಿತು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವಿಸ್ , ಇತರ ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page