31.5 C
Udupi
Wednesday, March 11, 2026
spot_img
spot_img
HomeBlog13 ವರ್ಷಗಳ ಕೋಮಾ ಜೀವನಕ್ಕೆ ಅಂತ್ಯ: ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

13 ವರ್ಷಗಳ ಕೋಮಾ ಜೀವನಕ್ಕೆ ಅಂತ್ಯ: ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ: ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಇದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಚಲಿಸಲು ಮತ್ತು ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಬದುಕುತ್ತಿದ್ದ ಮಗನ ಯಾತನೆಗೆ ಅಂತ್ಯಗೊಳಿಸಲು ಅವರ ವೃದ್ಧ ಪೋಷಕರು ನ್ಯಾಯಾಲಯವನ್ನು ಮೊರೆಹೋಗಿದ್ದು ಇದೀಗ ನ್ಯಾಯಾಲಯವು ಅಸ್ತು ಎಂದಿದೆ.

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ರಾಣಾ, 2013ರ ಆಗಸ್ಟ್ 20ರಂದು ಪಿಜಿ ವಸತಿಗೃಹದ ನಾಲ್ಕನೇ ಮಹಡಿಯಿಂದ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರು ಕೋಮಾ ಸ್ಥಿತಿಯಲ್ಲೇ ಇದ್ದು, ಟ್ರಾಕಿಯೊಸ್ಟೊಮಿ ಮತ್ತು ಗ್ಯಾಸ್ಟ್ರೋಸ್ಟೊಮಿ ಟ್ಯೂಬ್‌ಗಳ ಸಹಾಯದಿಂದ ಬದುಕುತ್ತಿದ್ದರು.

ಏಮ್ಸ್ ವೈದ್ಯಕೀಯ ಮಂಡಳಿ ಸಲ್ಲಿಸಿದ ವರದಿಯಲ್ಲಿ ಅವರ ಚೇತರಿಕೆಯ ಸಾಧ್ಯತೆ ಇಲ್ಲ ಎಂದು ತಿಳಿಸಲಾಗಿದ್ದು, ಈ ಹಿನ್ನೆಲೆ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠ ದಯಾಮರಣಕ್ಕೆ ಅನುಮತಿ ನೀಡಿದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page