28.2 C
Udupi
Tuesday, July 28, 2026
spot_img
spot_img
HomeBlog18 ವರ್ಷದೊಳಗಿನ ನೀಟ್ ಪ್ರತಿಭಟನಾಕಾರ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಆದೇಶ

18 ವರ್ಷದೊಳಗಿನ ನೀಟ್ ಪ್ರತಿಭಟನಾಕಾರ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಆದೇಶ

ನವದೆಹಲಿ: ನೀಟ್ (NEET) ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ಬಂಧನಕ್ಕೊಳಗಾದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಕ್ರಿಮಿನಲ್ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳ ವಿರುದ್ಧ ದಂಡನಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾಚಾರ ಮತ್ತು ಪೊಲೀಸ್ ದೌರ್ಜನ್ಯ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಈ ಮಹತ್ವದ ಆದೇಶ ನೀಡಿದೆ.

ಶಾಂತಿಯುತ ಹಾಗೂ ಕಾನೂನುಬದ್ಧ ಪ್ರತಿಭಟನೆ ನಡೆಸುವುದು ಸಂವಿಧಾನ ನೀಡಿರುವ ಮೂಲಭೂತ ಹಕ್ಕು. ಕೇವಲ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಪೊಲೀಸ್ ಬಲಪ್ರಯೋಗದ ಬಗ್ಗೆ ಸ್ವತಂತ್ರ ತನಿಖೆ ಅಗತ್ಯವೆಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅಶ್ರುವಾಯು, ವಿದ್ಯುತ್ ಲಾಠಿ ಹಾಗೂ ಪೆಲೆಟ್ ಗನ್ ಬಳಕೆಗೆ ದೇಶಾದ್ಯಂತ ಏಕರೂಪದ ಭದ್ರತಾ ಮಾರ್ಗಸೂಚಿ ರೂಪಿಸುವ ಅಗತ್ಯವಿದೆ ಎಂದು ಸೂಚಿಸಿದೆ.

ಜುಲೈ 20ರಿಂದ 25ರವರೆಗೆ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಆರ್‌ಜೆಡಿ ರಾಜ್ಯಸಭಾ ಸದಸ್ಯ ಪ್ರೊ. ಮನೋಜ್ ಝಾ ಸೇರಿದಂತೆ ಹಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಪ್ರತಿಭಟನೆ ವೇಳೆ 250ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಮಾಜವಿರೋಧಿ ಶಕ್ತಿಗಳು ಪ್ರತಿಭಟನೆಯೊಳಗೆ ನುಸುಳಿದ್ದವು ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page