
ಈ ವರ್ಷ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲಾಗಿದ್ದು 1901 ರ ನಂತರ ಇದೇ ಮೊದಲ ಬಾರಿಗೆ, ದೇಶದ ಹೆಚ್ಚಿನ ಭಾಗಗಳಲ್ಲಿ ತಾಪಮಾನದ ಏರಿಕೆ ದಾಖಲಾಗಿದೆ. ಮೇ ತಿಂಗಳಲ್ಲಿ ತೀವ್ರ ಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದ್ದು ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ. ಮೇ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು ಇದಲ್ಲದೇ ಬಿಸಿಗಾಳಿಯು 11 ದಿನಗಳವರೆಗೆ ಮುಂದುವರಿಯುತ್ತದೆ ಎಂದು ಮಾಹಿತಿ ನೀಡಿದೆ.