22.8 C
Udupi
Sunday, March 22, 2026
spot_img
spot_img
HomeBlog200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರೂ ಎಂದಿಗೂ ಬೋಲ್ಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ: ತಾಯಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ...

200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರೂ ಎಂದಿಗೂ ಬೋಲ್ಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ: ತಾಯಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಸರೋಜಾ ದೇವಿ

ಹಿರಿಯ ನಟಿ ಬಿ. ಸರೋಜಾ ದೇವಿ ಅವರು 87ನೇ ವಯಸ್ಸಿಗೆ ವಯೋ ಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಅಭಿನಯ ಸರಸ್ವತಿ ಆಗಿ ಗುರುತಿಸಿಕೊಂಡ ಅವರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರೂ ಎಂದಿಗೂ ಬೋಲ್ಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣ ಅವರು ತಾಯಿಗೆ ಕೊಟ್ಟ ಮಾತು. ಅದನ್ನು ಕೊನೆಯವರೆಗೂ ಕಾಪಾಡಿಕೊಂಡು ಬಂದರು.

ತಮ್ಮ 17ನೇ ವಯಸ್ಸಿಗೆ ಮೊದಲ ಮಹಿಳಾ ಸೂಪರ್ ಸ್ಟಾರ್ ಆದ ಸರೋಜಾ ದೇವಿ ಅವರು ‘ಪಾಂಡುರಂಗ ಮಹಾತ್ಯಂ’ ಚಿತ್ರದ ಮೂಲಕ ತೆಲುಗಿಗೆ ಕಾಲಿಟ್ಟರು. ‘ನಾಡೋಡಿ ಮನ್ನನ್ ’ ಚಿತ್ರದ ಮೂಲಕ ತಮಿಳಿನಲ್ಲಿ ಬೇಡಿಕೆಯ ನಟಿಯಾದರು. ಅವರು 60,70 ಹಾಗೂ 80ರ ದಶಕದಲ್ಲಿ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಗ್ರ ಸ್ಥಾನ ಪಡೆದರು.

ಬೆಂಗಳೂರಿನವರಾದ ಸರೋಜಾದೇವಿ ಅವರ ತಂದೆ ಭೈರಪ್ಪ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ಗೃಹಿಣಿ ಆಗಿದ್ದರು. ನೃತ್ಯ ಕಲಿಯಲು ಹಾಗೂ ನಟನೆಯನ್ನು ಆಯ್ಕೆ ಮಾಡಿಕೊಳ್ಳುವಂತೆ ಭೈರಪ್ಪ ಅವರು ಮಗಳಿಗೆ ಪ್ರೋತ್ಸಾಹಿಸಿದರು. ಅವರು ನಟನೆಗೆ ಬರಲು ಸಿದ್ಧವಾದಾಗ ತಾಯಿ ಮಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ನೀಡಿದರು. ಈಜುಡುಗೆ ಹಾಗೂ ತೋಳಿಲ್ಲದ ಬ್ಲೌಸ್ನ ಯಾವಾಗಲೂ ಹಾಕಬಾರದು ಎಂದು ತಾಯಿ ಸ್ಟ್ರಿಕ್ಟ್ ಆಗಿ ಹೇಳಿದ್ದರು. ಇದನ್ನು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪರಿಪಾಲಿಸಿಕೊಂಡು ಬಂದಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page