
ಕಾರ್ಕಳ: 2024-25ನೇ ಸಾಲಿನ ತಾಲೂಕು ಮಟ್ಟದ ಪ.ಜಾತಿ ಮತ್ತು ಪ.ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯು ನಡೆಯಲಿದ್ದು, ಪ.ಜಾತಿ ಮತ್ತು ಪ.ಪಂಗಡದವರ ಅಹವಾಲು ಮತ್ತು ಅರ್ಜಿಗಳನ್ನು ಲಿಖಿತ ರೂಪದಲ್ಲಿ ಸ್ವೀಕರಿಸಬೇಕಾಗಿರುವುದರಿಂದ ಜ.2ರಂದು ಸಂಜೆ 5.30ರೊಳಗೆ ಅರ್ಜಿಗಳನ್ನು ಕಾರ್ಕಳದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ನೀಡುವಂತೆ ಸಹಾಯಕ ನಿರ್ದೇಶಕ ಕುಮಾರ ಬಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.