
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಒಂದರಿಂದ 10ನೇ ತರಗತಿಯವರೆಗೆ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಲಿದೆ.
ಈಗಾಗಲೇ ಶಾಲೆಗಳು ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ನಡೆಸಿದ್ದು, ಮೊದಲ ದಿನವೇ ತರಗತಿಗಳು ಆರಂಭಗೊಳ್ಳಲಿದೆ. ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟದ ಜೊತೆ ಸಿಹಿಯೂ ಇರಲಿದೆ. ಈಗಾಗಲೇ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಕ್ಕಳಿಗೆ ಸಮವಸ್ತ್ರ ಜೊತೆ ಉಚಿತ ಪಠ್ಯ ಪುಸ್ತಕಗಳ ವಿತರಣೆಯು ನಡೆಯಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಬೆಂಗಳೂರಿನ ಆಡುಗೋಡಿಯ ಅಯ್ಯಪ್ಪ ಗಾರ್ಡನ್ನಲ್ಲಿರುವ ಪಾಟೀಲ್ ಮುನಿ ಚಿನ್ನಪ್ಪ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿ.ಕೆ ಶಿವಕುಮಾರ್ ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ.






















































