
ಹೊಸದಿಲ್ಲಿ: 2025ರ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಉಪಕ್ರಮಗಳನ್ನು ಘೋಷಿಸಿದ್ದು ಎಲ್ಲಾ ಸರ್ಕಾರಿ ಮಾಧ್ಯಮಿಕ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು 50,000 ಅಟಲ್ ಟಿಂಕರಿಂಗ್ ಲ್ಯಾಪ್ ಗಳು ಸ್ಥಾಪನೆ, ವಿದ್ಯಾರ್ಥಿಗಳು ತಮ್ಮ ಭಾಷೆಯಲ್ಲಿ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡಲು ಭಾರತೀಯ ಭಾಷಾ ಪುಸ್ತಕ ಯೋಜನೆ ಪ್ರಸ್ತಾಪನೆ ಹಾಗೂ ಎಲ್ಲಾ ಸರ್ಕಾರಿ ಮಾಧ್ಯಮಿಕ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕವನ್ನು ಒದಗಿಸಲಾಗುವುದು ಎಂದು ಹೇಳಿದರು.
ಇದಲ್ಲದೆ ಮುಂದಿನ ಐದು ವರ್ಷಗಳಲ್ಲಿ 75000 ಹೊಸ ವೈದ್ಯಕೀಯ ಸೀಟುಗಳನ್ನು ಸೇರಿಸುವುದಾಗಿ ಘೋಷಿಸಿದ ನಿರ್ಮಲ ಸೀತಾರಾಮನ್ ಐಐಟಿ ಸಾಮರ್ಥ್ಯ ವಿಸ್ತರಣೆಯ ಬಗ್ಗೆಯೂ ಭರವಸೆ ನೀಡಿದ್ದಾರೆ.





















