31.3 C
Udupi
Tuesday, April 14, 2026
spot_img
spot_img
HomeBlog2026-27 ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭ: ರಾಜ್ಯ ಸರ್ಕಾರ ವೇಳಾಪಟ್ಟಿ ಪ್ರಕಟ

2026-27 ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭ: ರಾಜ್ಯ ಸರ್ಕಾರ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದಡಿ ನಡೆಯುವ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 2026-27ನೇ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭವಾಗಲಿದೆ.

ಮೊದಲ ಅವಧಿ ಮೇ 29ರಿಂದ ಅಕ್ಟೋಬರ್ 2ರವರೆಗೆ ನಡೆಯಲಿದ್ದು, ದ್ವಿತೀಯ ಅವಧಿ ಅಕ್ಟೋಬರ್ 22ರಿಂದ 2027ರ ಏಪ್ರಿಲ್ 10ರವರೆಗೆ ಇರಲಿದೆ. ಆಗಸ್ಟ್ 3ರಿಂದ 21ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಒಟ್ಟು 365 ದಿನಗಳಲ್ಲಿ 119 ರಜೆ ದಿನಗಳು ಮತ್ತು 245 ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದೆ.

ಈ 245 ಕಾರ್ಯದಿನಗಳಲ್ಲಿ, ಎಫ್‌ಎ ಮತ್ತು ಎಸ್‌ಎ ಪರೀಕ್ಷೆಗಳಿಗೆ 26 ದಿನಗಳನ್ನು ಮೀಸಲಿಡಲಾಗಿದೆ. ಪಠ್ಯೇತರ ಚಟುವಟಿಕೆಗಳು ಹಾಗೂ ಸ್ಪರ್ಧೆಗಳಿಗೆ 24 ದಿನಗಳು, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆಗೆ 10 ದಿನಗಳು, ಸ್ಥಳೀಯ ರಜೆಗಳಿಗೆ 4 ದಿನಗಳು ಮತ್ತು ಬೋಧನೆ-ಅಭ್ಯಾಸ ಪ್ರಕ್ರಿಯೆಗೆ 181 ದಿನಗಳನ್ನು ಮೀಸಲಾಗಿವೆ ಎಂದು ಸೂಚಿಸಲಾಗಿದೆ. ಇದಲ್ಲದೆ, ದಾಖಲಾತಿ ಆಂದೋಲನ ಮತ್ತು ಶಾಲಾ ಪ್ರಾರಂಭೋತ್ಸವ ಸೇರಿದಂತೆ ರೂಢಿಯಂತೆ ನಡೆಯುವ ಚಟುವಟಿಕೆಗಳನ್ನೂ ಮುಂದುವರಿಸಲು ಸೂಚಿಸಲಾಗಿದೆ.

ಮಕ್ಕಳ ದಾಖಲಾತಿಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಶಾಲೆ ಬಿಟ್ಟಿರುವ 6ರಿಂದ 18 ವರ್ಷದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ದಾಖಲಾತಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page