
ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿಯ ಹಾಜಿ ಅಬ್ದುಲ್ಲ ಸಾಹೇಬ್ ಚಾರಿಟೇಬಲ್ ಟ್ರಸ್ಟ್, ಸಂದೀಪ್ ಶೆಟ್ಟಿ ಸಾರಥ್ಯದ ಏಸ್ ಕ್ರೀಟ್ ಅಡೆಶನ್ಸ್ ಹಾಗೂ ‘ಉಸಿರು ಕೋಟ’ ಸಂಸ್ಥೆಗಳ ಸಯುಕ್ತ ಆಶ್ರಯದಲ್ಲಿ ನೀಡಲಾಗುವ 2026 ನೇ ಸಾಲಿನ ಪ್ರತಿಷ್ಠಿತ ಕಾರಂತ ಶಿಕ್ಷಕ ಪುರಸ್ಕಾರಕ್ಕೆ ಶಿಕ್ಷಕರಾದ ಹರೀಶ್ ಕಲ್ಯಾಣಪುರ ಇವರು ಆಯ್ಕೆಯಾಗಿರುತ್ತಾರೆ.
ಶ್ರೀಯುತರು ಶಾಲಾ-ಕಾಲೇಜುಗಳ ದಿನಗಳಲ್ಲಿಯೇ ಯಕ್ಷಗಾನ ಕಲಾವಿದರಾಗಿ ಪ್ರಸಂಗಕರ್ತರಾಗಿ, ಸ್ಕೌಟ್ ಮತ್ತು ಗೈಡ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ನಾಟಕ ಹಾಗೂ ಪ್ರಸಾದನ ಕಲೆಯನ್ನು ಪ್ರವೃತ್ತಿಯನ್ನಾಗಿ ರೂಡಿಸಿಕೊಂಡಿದ್ದಾರೆ. ಕೆ ಎಂ ಇ ಎಸ್ ಶಿಕ್ಷಣ ಸಂಸ್ಥೆ ಕುಕ್ಕುಂದೂರು, ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್ ಕಾರ್ಕಳ, ಇಲ್ಲಿ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸಿದ್ದು, ಪ್ರಸ್ತುತ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಮಾತ್ರವಲ್ಲದೆ ಸ್ಕೌಟ್ ಮತ್ತು ಗೈಡ್ ಶಿಕ್ಷಕರಾಗಿ ಸಂಪನ್ಮೂಲ ವ್ಯಕ್ತಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.































































































































