32.6 C
Udupi
Thursday, November 21, 2024
spot_img
spot_img
HomeBlog2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ 50% ಮೀಸಲಾತಿ: ಸಿಎಂ ಘೋಷಣೆ

2028ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ 50% ಮೀಸಲಾತಿ: ಸಿಎಂ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದು ಈ ವೇಳೆ ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

ಇಂದಿರಾ ಗಾಂಧಿ ಅವರ ಬದುಕು ಎಲ್ಲರಿಗೂ ಆದರ್ಶ. ದೇಶಕ್ಕಾಗಿ ಪ್ರಾಣ ಕೊಟ್ಟ ಅವರನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬಡವರ ಏಳಿಗೆ ಆಗಬೇಕೆಂದರೆ ಶಿಕ್ಷಣ, ರಾಜಕೀಯ, ಆರ್ಥಿಕ ಶಕ್ತಿ, ಸಮಾನ ಅವಕಾಶಗಳನ್ನು ನೀಡಬೇಕು ಎಂದಿದ್ದರು. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಮೂಲಕ ಬಡವರಿಗೆ ಬಾಗಿಲು ತೆಗೆಸಿದರು ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮಾತನಾಡಿ, ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಜಾರಿಗೊಳಿಸಲಿ. ಶೇ.50ರಷ್ಟು ಮೀಸಲಾತಿ ಮಿತಿಯನ್ನು ಮೀರಿ, ಶೇ.75ರಷ್ಟು ಮೀಸಲಾತಿಯನ್ನು ಸಿದ್ದರಾಮಯ್ಯ ಅವರು ಅನುಷ್ಠಾನಗೊಳಿಸುತ್ತಾರೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page