24.7 C
Udupi
Monday, March 9, 2026
spot_img
spot_img
HomeBlog"2028ರ ಚುನಾವಣೆಯಲ್ಲಿ ರಮಾನಾಥ್ ರೈ ಅವರನ್ನು ಮತ್ತೆ ಗೆಲ್ಲಿಸಿ" : ಸಿಎಂ ಸಿದ್ದರಾಮಯ್ಯ ಮನವಿ

“2028ರ ಚುನಾವಣೆಯಲ್ಲಿ ರಮಾನಾಥ್ ರೈ ಅವರನ್ನು ಮತ್ತೆ ಗೆಲ್ಲಿಸಿ” : ಸಿಎಂ ಸಿದ್ದರಾಮಯ್ಯ ಮನವಿ

ಬಂಟ್ವಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು – ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದು ಈ ವೇಳೆ 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದಿದ್ದಾರೆ.

ರಮಾನಾಥ ರೈ ಅವರು ತಮ್ಮ ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದು ಹೇಳಿದರು.

ಈ ವೇಳೆ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವನ್ ಡಿಸೋಜ, ಶಾಸಕ ಅಶೋಕ್ ರೈ , ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page