29.6 C
Udupi
Tuesday, April 21, 2026
spot_img
spot_img
HomeBlog4 ವರ್ಷಗಳಿಂದ ಜಿಪಂ, ತಾಪಂ ಎಲೆಕ್ಷನ್‌ ನಡೆದಿಲ್ಲವೇ ಎಂದು ಪ್ರಶ್ನಿಸಿ, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ...

4 ವರ್ಷಗಳಿಂದ ಜಿಪಂ, ತಾಪಂ ಎಲೆಕ್ಷನ್‌ ನಡೆದಿಲ್ಲವೇ ಎಂದು ಪ್ರಶ್ನಿಸಿ, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಸರ್ಕಾರವು 4 ವರ್ಷಗಳಿಂದ ರಾಜ್ಯದಲ್ಲಿ ತಾ.ಪಂ. ಹಾಗೂ ಜಿ.ಪಂ. ಚುನಾವಣೆ ನಡೆಸದ ಕ್ರಮಕ್ಕೆ ತೀವ್ರ ಅಚ್ಚರಿ ವ್ಯಕ್ತಪಡಿಸಿ, ಹೈಕೋರ್ಟ್ ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ಹಾಗೂ ಅವುಗಳ ಸ್ವತಂತ್ರ ನಿರ್ವಹಣೆಗೆ ಸಹಕಾರ ನೀಡುವ ಉದ್ದೇಶದಿಂದ ಸಂವಿಧಾನದ 73 ಮತ್ತು 74ನೇ ವಿಧಿಗೆ ತಂದಿರುವ ತಿದ್ದುಪಡಿಯಿಂದ ಕರ್ನಾಟಕಕ್ಕೆ ವಿನಾಯಿತಿ ಇದೆಯೇ ಎಂದು ತರಾಟೆಗೆ ತೆಗೆದುಕೊಂಡಿದೆ.

ಸೋಮವಾರ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠವು ಅರ್ಜಿಗಳ ವಿಚಾರಣೆ ನಡೆಸಿ ಅರ್ಜಿದಾರರ ಪರ ವಕೀಲ ಮೊಹಮ್ಮದ್ ತಾಹಿರ್, ಕಾನೂನಿನ ಪ್ರಕಾರ ಜಿ.ಪಂ. ಹಾಗೂ ತಾ.ಪಂ. ಅವಧಿ ಮುಗಿದ ಆರು ತಿಂಗಳಲ್ಲಿ ಚುನಾವಣೆ ನಡೆಸಬೇಕು. ಆದರೆ ಅವಧಿ ಮುಗಿದು ನಾಲ್ಕು ವರ್ಷ ಕಳೆದಿದ್ದರೂ ಚುನಾವಣೆ ನಡೆಸಿಲ್ಲ. ಅವುಗಳು ಸದ್ಯ ರಾಜ್ಯ ಸರ್ಕಾರದ ಆಡಳಿತಾಧಿಕಾರಿಗಳ ಅಧೀನದಲ್ಲಿವೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ರಾಜ್ಯ ಹೆಚ್ಚುವರಿ ಅಡ್ವಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ಲೋಕಸಭೆ ಚುನಾವಣೆ ಹಾಗೂ ಇನ್ನಿತರ ಕಾರಣಗಳಿಗೆ ಚುನಾವಣೆ ವಿಳಂಬವಾಗಿದೆ. ರಾಜ್ಯದ ಎಲ್ಲಾ 31 ಜಿ.ಪಂ.ಗಳ ಕ್ಷೇತ್ರ ಪುನರ್ ವಿಂಗಡಣೆ ಕಾರ್ಯ ಈಗಾ
ಗಲೇ ಪೂರ್ಣಗೊಂಡಿದೆ. ಮೀಸಲು ನಿಗದಿಪಡಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅದನ್ನು ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ಬೇಕಿದೆ ಎಂದರು.

ಈ ಮಧ್ಯೆ ನ್ಯಾಯಪೀಠ, ಕ್ಷೇತ್ರ ಮರು ವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಕಾರ್ಯ ಚುನಾವಣಾ ಆಯೋಗದ್ದಲ್ಲವೇ ಎಂದು ಪ್ರಶ್ನೆಸಿತು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಉತ್ತರಿಸಿ, ಈ ಮೊದಲು ಆ ಅಧಿಕಾರ ಆಯೋಗದ ಬಳಿಯೇ ಇತ್ತು. ಅದರಂತೆ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮುಗಿಸಿತ್ತು. ಆದರೆ, ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಪುನರ್ ವಿಂಗಡಣೆ ಹಾಗೂ ಮೀಸಲು ನಿಗದಿ ಅಧಿಕಾರವನ್ನು ಆಯೋಗದಿಂದ ಹಿಂಪಡೆದಿದೆ. ಇದರಿಂದ ಚುನಾವಣೆ ವಿಳಂಬವಾಗಿದೆ. ಸರ್ಕಾರದ ಈ ಕ್ರಮವನ್ನೂ ಆಯೋಗ ಹೈಕೋರ್ಟ್ನಲ್ಲಿ ಪ್ರಶ್ನಿಸಿದೆ. ಇನ್ನು 12 ವಾರಗಳಲ್ಲಿ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವೇ ಈ ಹಿಂದೆ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ವರ್ಷ ಉರುಳಿದ್ದರೂ ಸರ್ಕಾರ ತನ್ನ ಮಾತಿನಂತೆ ನಡೆದುಕೊಂಡಿಲ್ಲ. ಅದಕ್ಕಾಗಿಯೇನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಅರ್ಜಿಗಳ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page