26.2 C
Udupi
Thursday, April 23, 2026
spot_img
spot_img
HomeBlog40 ವರ್ಷಗಳ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ – ನೀರಿಗೆ ಬಿದ್ದ...

40 ವರ್ಷಗಳ ಹಿಂದೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ – ನೀರಿಗೆ ಬಿದ್ದ ಲಾರಿ ಚಾಲಕನ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 40 ವರ್ಷದ ಹಿಂದೆ ಕಾಳಿ ನದಿ ಸೇತುವೆಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿದು ಬಿದ್ದ ಪರಿಣಾಮ ತಮಿಳುನಾಡು ಮೂಲದ ಲಾರಿಯೊಂದು ನದಿಗೆ ಬಿದ್ದ ಘಟನೆ ಸಂಭವಿಸಿದೆ.

ಗೋವಾದಿಂದ ಹುಬ್ಬಳ್ಳಿಗೆ ತೆರಳುತಿದ್ದ ಖಾಲಿ ಲಾರಿ ಕಾಳಿನದಿಯ ಸೇತುವೆಮೇಲೆ ವೇಗವಾಗಿ ಹೋಗುತ್ತಿದ್ದ ವೇಳೆ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಸೇತುವೆ ಕುಸಿದಿದ್ದು, ಘಟನೆಯಲ್ಲಿ ಲಾರಿ ಚಾಲಕ ಬಾಲಮುರುಗನ್ ಅವರನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ ಚಾಲಕ ಲಾರಿಯ ಕ್ಯಾಬಿನ್ ಮೇಲೆ ನಿಂತು ಕೂಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಆಗಮಿಸಿದ ಕರಾವಳಿ ಕಾವಲುಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ಅವರ ರಕ್ಷಣೆ ಮಾಡಲಾಗಿದೆ.

ಕಾಳಿ ನದಿಯ ಸೇತುವೆಯು ಮೂರು ಕಡೆ ಕುಸಿದಿದ್ದು ಕಾರವಾರದಿಂದ ಗೋವಾ ಕಡೆಗೆ ತೆರಳುವ ಮೊದಲ ಭಾಗ, ನಂತರ ಮಧ್ಯ ಭಾಗ, ಅದರ ನಂತರ ಗೋವಾದಿಂದ ಕಾರವಾರದ ಕಡೆ ಬರುವ ಪ್ರಾರಂಭದಲ್ಲಿ ಸೇತುವೆಯ ಮೇಲ್ಛಾವಣಿ ಹಾಸು ಕುಸಿದು ಹೋಗಿದೆ. ಹೀಗಾಗಿ ಗೋವಾ-ಕಾರವಾರ ಮಾರ್ಗದ ಎರಡು ಭಾಗದ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು ಜಿಲ್ಲಾಧಿಕಾರಿ, ಕಾರವಾರದ ಶಾಸಕ ಸತೀಶ್ ಸೈಲ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಂತರ ಆಸ್ಪತ್ರೆಗೆ ತೆರಳಿ ಗಾಯಾಳುವನ್ನು ಭೇಟಿಯಾಗಿ ಮಾಹಿತಿ ಪಡೆದರು

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page