26.2 C
Udupi
Friday, April 24, 2026
spot_img
spot_img
HomeBlog402 ಪಿಎಸ್‌ಐ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದ ಸರ್ಕಾರ

402 ಪಿಎಸ್‌ಐ ಹುದ್ದೆಗಳಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿದ ಸರ್ಕಾರ

ಬೆಂಗಳೂರು: ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ರಾಜ್ಯ ಸರ್ಕಾರದಲ್ಲಿ ಖಾಲಿಯಿದ್ದ 402 ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.22ರ ಬದಲಾಗಿ ಸೆ.28ರ ಶನಿವಾರದಂದು ನಡೆಸಲು ಮುಂದೂಡಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು ಇದರ ಜೊತೆಗೆ ವಿಪಕ್ಷವಾದ ಬಿಜೆಪಿಯ ನಾಯಕರ ನಿಯೋಗವು ಮನವಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು.

ಬಳಿಕ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದು ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ ಎಂದು ಮನವಿಯನ್ನೂ ಮಾಡಲಾಗಿತ್ತು. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲಕರವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು ಎಲ್ಲ ಪಿಎಸ್‌ಐ ಅಭ್ಯರ್ಥಿಗಳ ಒಳಿತಿನಿಂದ ಸರ್ಕಾರದಿಂದ ಈ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು..

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page