
ನವದೆಹಲಿ: ಐಎನ್‍ಡಿಐಎ ಕೂಟ ವಿಪಕ್ಷ ಸ್ಥಾನದಲ್ಲಿ ಕೂರಲು ನಿರ್ಧರಿಸಿದ ಬೆನ್ನಲ್ಲೇ ಮೋದಿ-ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಎಕ್ಸಿಟ್ ಪೋಲ್‍ಗಳನ್ನು ಮತ್ತು ಜೂನ್ ನಾಲ್ಕರ ಷೇರುಪೇಟೆ ಮಹಾಪತನವನ್ನು ಅತಿ ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ.
ಇದು ಮೋದಿ ಸೇರಿ ಬಿಜೆಪಿಯ ಉನ್ನತ ನಾಯಕರು ಸೇರಿಕೊಂಡು ಮಾಡಿರುವ ಹಗರಣ. ಇದರಿಂದ ಹೂಡಿಕೆದಾರರಿಗೆ 30 ಲಕ್ಷ ಕೋಟಿ ನಷ್ಟವಾಗಿದ್ದು ಈ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಯಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಈ ಮಧ್ಯೆ ಐಎನ್‍ಡಿಐಎ ಕೂಟ ವಿಪಕ್ಷ ನಾಯಕತ್ವ ಜವಾಬ್ದಾರಿ ವಹಿಸಲು ಮುಂದಾಗಿದ್ದು ಆದರೆ ರಾಹುಲ್ ಗಾಂಧಿ ಇನ್ನೂ ತಮ್ಮ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ವಯನಾಡು-ರಾಯ್‍ಬರೇಲಿ ಪೈಕಿ ಸ್ಥಾನವನ್ನು ಬಿಟ್ಟುಕೊಡಬೇಕು ಎಂಬ ಜಿಜ್ಞಾಸೆಯಲ್ಲಿ ರಾಹುಲ್ ಗಾಂಧಿ ಇದ್ದಾರೆ ಎಂದು ತಿಳಿದುಬಂದಿದೆ.