
ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ ಇದರ ವತಿಯಿಂದ 2026ರ 72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಇದರ ಭಾಗವಾಗಿ ವಿದ್ಯಾರ್ಥಿಗಳಲ್ಲಿ ವನ್ಯಜೀವಿಗಳ ಸಂರಕ್ಷಣೆ, ಪರಿಸರ ರಕ್ಷಣೆ ಹಾಗೂ ಜೀವವೈವಿಧ್ಯದ ಮಹತ್ವದ ಕುರಿತು ಅರಿವು ಮೂಡಿಸುವ ಸಲುವಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಸ್ಕೂಲ್, ಕಾರ್ಕಳದ ಇಲ್ಲಿನ ನಾಲ್ಕನೇ ತರಗತಿಯ ವಿದ್ಯಾರ್ಥಿನಿಯಾದ ಪ್ರಕೃತಿ (1-4 ತರಗತಿಯ ವಿಭಾಗದ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ.






















