ರಾಜ್ಯ ಸಚಿವ ಸಂಪುಟ ಸಭೆ, ತೀರ್ಮಾನ

ರಾಜ್ಯದ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆ ಹಾಗೂ 41 ಉರ್ದು ಮಾಧ್ಯಮ ಶಾಲೆ ಸೇರಿ ಒಟ್ಟು 117 ಶಾಲೆಗಳನ್ನು 683.33 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಣ ಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
2025-26 ನೇ ಸಾಲಿನ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಿಂದ ಕೆಪಿಎಸ್ ಮಾದರಿಗೆ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಉರ್ದು ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಸರಕಾರ ಪ್ರಸ್ತಾಪಿಸಿತ್ತು.









